ನವದೆಹಲಿ:ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿಗೂ ಸೋಂಕು ಇರುವುದು ದೃಢಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ, ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಕೋವಿಡ್ನ ಸೌಮ್ಯ ರೋಗಲಕ್ಷಣಗಳೊಂದಿಗೆ ಧನಾತ್ಮಕ ಪರೀಕ್ಷೆಗೊಳಪಟ್ಟಿದ್ದೇನೆ. ಕೋವಿಡ್ನ ಎಲ್ಲ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಯಲ್ಲಿ ಸೆಲ್ಫ ಕ್ವಾರಂಟೈನ್ಗೊಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ. ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಪ್ರತ್ಯೇಕವಾಗಿ ಉಳಿದುಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.
ದೇಶದಲ್ಲಿ ಕೆಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ತುಸು ಏರಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಅಧಿಕ ಹೊಸ ಸೋಂಕಿತ ಪ್ರಕರಣಗಳು ಕಂಡು ಬಂದಿವೆ.
ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಕೇಸ್ ಸಮನ್ಸ್.. ಸೋನಿಯಾ ಗಾಂಧಿಗೆ ಕೋವಿಡ್, ಸೆಲ್ಫ್ ಕ್ವಾರಂಟೈನ್