ಸೂರತ್(ಗುಜರಾತ್):ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಮಗೆ ವಿಧಿಸಲಾದ 2 ವರ್ಷ ಶಿಕ್ಷೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಗುಜರಾತ್ನ ಸೂರತ್ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದ ಗಾಂಧಿ ತಮ್ಮ ವಿರುದ್ಧದ ಶಿಕ್ಷೆಯನ್ನು ಉನ್ನತ ಕೋರ್ಟ್ನಲ್ಲಿ ಸವಾಲು ಮಾಡಿದರು. ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಮೇ 3 ರಂದು ಸೂರತ್ ನ್ಯಾಯಾಲಯದಲ್ಲಿ ನಡೆಯಲಿದೆ. ಇದೇ ವೇಳೆ, ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನಿಗೆ ನೀಡಿದ ಜಾಮೀನನ್ನು 10 ದಿನಗಳ ಕಾಲ ವಿಸ್ತರಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 13 ರಂದು ಮುಂದೂಡಿದೆ.
ಸೂರತ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕಾ ವಾದ್ರಾ ಅವರ ಜೊತೆಗೆ ವಿಮಾನದಲ್ಲಿ ಸೂರತ್ಗೆ ಆಗಮಿಸಿದರು. ರಾಹುಲ್ಗೆ ಬೆಂಬಲವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲಾ ಅವರು ಸೇರಿದಂತೆ ಗುಜರಾತನ್ ಕಾಂಗ್ರೆಸ್ ನಾಯಕರು ಜೊತೆಯಲ್ಲಿದ್ದರು.
ನಾಯಕರ ಜೊತೆಗೂಡಿ ಸೂರತ್ ಜಿಲ್ಲಾ ನ್ಯಾಯಾಲಯಕ್ಕೆ ಬಂದ ರಾಹುಲ್ ಗಾಂಧಿ ತಮ್ಮ ವಿರುದ್ಧ ಮಾನಹಾನಿ ಕೇಸಲ್ಲಿ ನೀಡಲಾದ ಶಿಕ್ಷೆಯನ್ನು ಪ್ರಶ್ನಿಸಿ ಎರಡು ಅರ್ಜಿಗಳನ್ನು ಸಲ್ಲಿಸಿದರು. ಅರ್ಜಿಯ ವಿಚಾರಣೆಯನ್ನು ಮೇ 3 ಕ್ಕೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿತು. ಇದೇ ವೇಳೆ, ಪ್ರಕರಣದಲ್ಲಿ ಕೋರ್ಟ್ ನೀಡಿದ್ದ ಜಾಮೀನಿನ ಅವಧಿಯನ್ನು 10 ದಿನ ವಿಸ್ತರಣೆ ಮಾಡಿತು. ಬಳಿಕ ರಾಹುಲ್ ಅವರು ಕಾಂಗ್ರೆಸ್ ನಾಯಕರು, ಬೆಂಬಲಿಗರೊಂದಿಗೆ ಕೋರ್ಟ್ ಆವರಣದಿಂದ ಹೊರಬಂದರು.