ಚಂಡೀಗಢ (ಪಂಜಾಬ್):ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕುಟುಂಬದ ಸದಸ್ಯರನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ. ಚಂಡೀಗಢದ ಮಾನ್ಸಾದಲ್ಲಿ ರಾಹುಲ್ ಗಾಂಧಿ ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬದ ಸದಸ್ಯರನ್ನ ಈಗಾಗಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಹುಲ್ ಗಾಂಧಿ ಕೂಡ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.