ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ನಾಗರಿಕರ ಸಾವಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ 'ನಿಜವಾದ ಉತ್ತರ' ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮೋನ್ ಜಿಲ್ಲೆಯಲ್ಲಿ ನಾಗರಿಕರ ಸಾವಿನ ಕುರಿತಂತೆ ಟ್ವಿಟರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಗೃಹ ಸಚಿವಾಲಯ ಏನು ಮಾಡುತ್ತಿದೆ?, ಈ ಕುರಿತು ಸರ್ಕಾರ 'ನಿಜವಾದ ಉತ್ತರ' ನೀಡಬೇಕೆಂದು ಒತ್ತಾಯಿಸಿದ್ದಾರೆ.