ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌಮ್ಯ ಜ್ವರದಿಂದ (Mild Fever) ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
''ಸೋನಿಯಾ ಗಾಂಧಿ ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೆನ್ನಾಗಿಯೇ ಇದ್ದಾರೆ. ವೈದ್ಯರ ತಂಡ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ'' ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.