ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚುನಾವಣಾ ಮೈತ್ರಿ ಮಾಡಿಕೊಂಡಿರುವ ಸಿಪಿಐ (ಎಂ) ನೇತೃತ್ವದ ಎಡರಂಗ ಮತ್ತು ಕಾಂಗ್ರೆಸ್ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಕೋಲ್ಕತ್ತಾದಲ್ಲಿ ಮೆಗಾ ಜಂಟಿ ರ‍್ಯಾಲಿ ಆಯೋಜಿಸಲಿವೆ ಎಂದು ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ತಿಳಿಸಿದ್ದಾರೆ.
ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಜಂಟಿಯಾಗಿ ಮೆಗಾ ರ‍್ಯಾಲಿ ನಡೆಸಲು ಉಭಯ ಪಕ್ಷಗಳು ನಿರ್ಧರಿಸಿವೆ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಡಪಂಥೀಯ ಪಕ್ಷಗಳ ಕೇಂದ್ರ ನಾಯಕರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ 294 ಸದಸ್ಯರ ವಿಧಾನಸಭೆಗೆ ಚುನಾವಣೆಗೆ ಸ್ಥಾನ ಹಂಚಿಕೆಗಾಗಿ ಸಭೆ ನಡೆಸುತ್ತಿದ್ದಾರೆ.