ಲಕ್ನೋ: ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ನಡೆಯುತ್ತಿರುವ ರೈತರ ಆಂದೋಲನದ ಮಧ್ಯೆಯೇ ಕಾಂಗ್ರೆಸ್ ತನ್ನ ರಾಜಕೀಯ ನೆಲೆಯನ್ನು ಬಲಪಡಿಪಡಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಕಾಂಗ್ರೆಸ್ 'ಕೃಷಿ ವಿರೋಧಿ ಕಾನೂನುಗಳು' ಎಂಬ ಆಂದೋಲನವನ್ನು ಇಂದಿನಿಂದ ಪ್ರಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ನಾಲ್ಕು ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇಂದು ಸಹರಾನ್‌ಪುರಕ್ಕೆ ಭೇಟಿ ನೀಡಿ, 'ಕಿಸಾನ್ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.