ನವದೆಹಲಿ: ಸುದೀರ್ಘ ಸಮಯದ ನಂತರ ಕಾಂಗ್ರೆಸ್ ಶೀಘ್ರದಲ್ಲೇ ಪಕ್ಷದ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಿದೆ. ಅಧ್ಯಕ್ಷೀಯ ಚುನಾವಣೆಗಳಿಗಾಗಿ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರವು ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಇದು ಜೂನ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇತ್ತು. ಆದರೆ ಈ ವಿಚಾರ ಮತ್ತೆ ಮುಂದೂಡಿಕೆ ಆಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಾಂಗ್ರೆಸ್ಗೆ ನೂತನ ಸಾರಥಿ ಆಯ್ಕೆ ಪ್ರಕ್ರಿಯೆ ಮುಂದೂಡಿಕೆ ಆಗಿದೆ. ಇಂದು ನಡೆದ ಕಾಂಗ್ರೆಸ್ ಸಿಡಬ್ಲ್ಯುಸಿ ಸಭೆಯಲ್ಲಿ ಈ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಮತ್ತೆ ಆಯ್ಕೆ ಪ್ರಕ್ರಿಯೆ ಮುಂದೂಡಿಕೆ ಆಗಿದೆ. ಕಳೆದ ಸಭೆಯಲ್ಲಿ ಚುನಾವಣೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿತ್ತು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಗ್ಗೆ ಚರ್ಚೆ ಮಾಡಿದರು. ಕಾಂಗ್ರೆಸ್ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯು ವೇಳಾಪಟ್ಟಿಯ ಬಗ್ಗೆ ಚರ್ಚಿಸುತ್ತದೆ ಎಂದೂ ಈ ಮೊದಲು ತಿಳಿಸಿದ್ದರು.
ನಾವು ಜನವರಿ 22 ರಂದು ಈ ಬಗ್ಗೆ ಚರ್ಚೆ ನಡೆಸಿದ್ದಾಗ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಜೂನ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನಾವು ನಿರ್ಧರಿಸಿದ್ದವು. ಈ ಸಂಬಂಧ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಜಿ ಅವರು ವೇಳಾಪಟ್ಟಿ ಸಹ ಸಿದ್ಧವಾಗಿತ್ತು. ವೇಣುಗೋಪಾಲ್ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಸೋನಿಯಾ ಗಾಂಧಿ ಸಭೆಯಲ್ಲಿ ಈ ಮೊದಲು ಮಾಹಿತಿ ನೀಡಿದ್ದರು. ಆದರೆ ಅಂತಿಮವಾಗಿ ಕೋವಿಡ್ ಹಿನ್ನೆಲೆ ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆ ಮುಂದೂಡಲು ನಿರ್ಧರಿಸಲಾಗಿದೆ.
ಕಾಂಗ್ರೆಸ್‌ನಲ್ಲಿ ನಾಯಕತ್ವ ಪ್ರಶ್ನಿಸಿ 23 ನಾಯಕರ ಗುಂಪು ಸೋನಿಯಾ ಗಾಂಧಿಗೆ ಪತ್ರ ಬರೆದ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ನಿರ್ಧಾರ ತೆಗೆದು ಕೊಳ್ಳಲಾಗಿದೆ.