ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್, ಕೇಸರಿ ಶಾಲು ವಿವಾದ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದ ಕೆ ಸುರೇಶ್ ಇಂದು ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ
ಕರ್ನಾಟಕದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪರ - ವಿರೋಧಗಳು ಚರ್ಚೆಯಾಗುತ್ತಿವೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಚರ್ಚೆಯ ಅಗತ್ಯವಿದೆ.