ನವದೆಹಲಿ:ಕಳೆದೊಂದು ತಿಂಗಳಿನಿಂದ ಕರ್ನಾಟಕದಲ್ಲಿ ಹಿಜಾಬ್ ವಿವಾದ ನಡೆಯುತ್ತಿದೆ. ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಬರುವುದಕ್ಕೆ ಉಡುಪಿಯ ಕಾಲೇಜೊಂದರಲ್ಲಿ ಮೊದಲು ವಿರೋಧ ವ್ಯಕ್ತವಾಗಿದ್ದು, ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಕರ್ನಾಟಕದ ಹಿಜಾಬ್ ವಿವಾದ ಇಂದು ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇರಳದ ಕಾಂಗ್ರೆಸ್ ಸಂಸದ ಟಿಎನ್ ಪ್ರತಾಪನ್, "ಕರ್ನಾಟಕದ ಹಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಕಾಲೇಜು ಆವರಣ ಹಾಗೂ ತರಗತಿ ಪ್ರವೇಶಿಸುವುದನ್ನು ನಿಷೇಧಿಸಲಾಗುತ್ತಿದೆ. ಈಗ ಈ ವಿದ್ಯಾರ್ಥಿನಿಯರು ಕಾಲೇಜು ಗೇಟ್ಗಳ ಹೊರಗೆ ಕುಳಿತು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಪ್ರತಿಭಟಿಸುತ್ತಿದ್ದಾರೆ" ಎಂದರು.