ನವದೆಹಲಿ :ರಾಜ್ಯಸಭೆ ಪ್ರತಿಪಕ್ಷ ನಾಯಕರಾಗಿ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೆಸರನ್ನು ಕಾಂಗ್ರೆಸ್ ಶಿಫಾರಸು ಮಾಡಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವಧಿ ಫೆಬ್ರವರಿ 15ರಂದು ಮುಕ್ತಾಯವಾಗಿದೆ. ಈ ಸ್ಥಾನ ತುಂಬಲು ಖರ್ಗೆ ಹೆಸರನ್ನು ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಅವರ ಸ್ಥಾನ ತುಂಬುವವರಾರು.. ಖರ್ಗೆಗೆ ಸಿಗುತ್ತಾ ಅವಕಾಶ?
ವಿಶ್ವಾಸಾರ್ಹ ನಾಯಕ ಹಾಗೂ ರಾಹುಲ್ ಗಾಂಧಿಗೆ ಹತ್ತಿರವಾಗಿರುವ ಕಾರಣ ಮಲ್ಲಿಕಾರ್ಜುನ್ ಖರ್ಗೆಗೆ ರಾಜ್ಯಸಭೆ ಪ್ರತಿಪಕ್ಷ ನಾಯಕರಾಗುವ ಅವಕಾಶ ಸಿಗಲಿದೆ. ಇದೀಗ ಇದು ಬಹುತೇಕ ಖಚಿತವಾಗಿದೆ.
ನಿರ್ಗಮಿತ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಣ್ಣೀರಿನ ವಿದಾಯ ಹೇಳಿದ್ದನ್ನ ಇಲ್ಲಿ ಸ್ಮರಿಸಬಹುದು.