ಪುಣೆ(ಮಹಾರಾಷ್ಟ್ರ): ದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಬೇಕು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಕ್ಷೀಣಿಸುತ್ತಿರುವುದರಿಂದ ಪ್ರಾದೇಶಿಕ ಪಕ್ಷಗಳ ಬಲ ಹೆಚ್ಚುತ್ತಿದೆ. ವಿರೋಧವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ದೇಶ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷವನ್ನು ಹೊಂದಿರಬೇಕು. ಹಾಗಾಗಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಇರಬೇಕು ಎಂದರು.
ಆಮ್ ಆದ್ಮಿ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ನ ಸ್ಥಾನವನ್ನು ತುಂಬಲು ಶಕ್ತವಿಲ್ಲ. ಖಾಸಗಿ ಪತ್ರಿಕೆಯೊಂದರ ಪ್ರಶಸ್ತಿ ಸಮಾರಂಭದಲ್ಲಿ ಸಚಿವ ನಿತಿನ್ ಗಡ್ಕರಿ ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ.