ಕರ್ನಾಟಕ

karnataka

ETV Bharat / bharat

ಶಾಸಕಾಂಗ ಪಕ್ಷದ ಸಭೆ ನಂತರ ಸಿಎಂ ಬಗ್ಗೆ ಹೈಕಮಾಂಡ್​ ನಿರ್ಧಾರ: ಮಲ್ಲಿಕಾರ್ಜುನ್ ಖರ್ಗೆ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯ ನಂತರ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Congress president Mallikarjun Kharge on  CLP meeting in Bengaluru
ಶಾಸಕಾಂಗ ಪಕ್ಷದ ಸಭೆ ನಂತರ ಸಿಎಂ ಬಗ್ಗೆ ಹೈಕಮಾಂಡ್​ ನಿರ್ಧಾರ: ದೆಹಲಿಯಲ್ಲಿ ಖರ್ಗೆ ಹೇಳಿಕೆ

By

Published : May 14, 2023, 5:31 PM IST

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸರ್ಕಾರ ರಚನೆ ಕಸರತ್ತು ಆರಂಭಿಸಿದೆ. ಇಂದು ಬೆಂಗಳೂರಿನಲ್ಲಿ ಮಹತ್ವದ ಶಾಸಕಾಂಗ ಪಕ್ಷದ ನಡೆಯಲಿದೆ. ಮತ್ತೊಂದೆಡೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತಲುಪಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಮುಂದಿನ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವಿನ ಬಳಿಕ ಮೊದಲು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಗೆ ಖರ್ಗೆ ಮರಳಿದ್ದಾರೆ. ಇಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅದ್ದೂರಿ ಸ್ವಾಗತ ಕೋರಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಖರ್ಗೆ ಅವರಿಗೆ ಹಿರಿಯ ನಾಯಕರು ಹೂಗುಚ್ಛ ನೀಡಿ ಬರ ಮಾಡಿಕೊಂಡರು. ನಂತರ ತಮ್ಮ ನಿವಾಸಕ್ಕೆ ತಲುಪಿಸಿದ ನಂತರವೂ ಕಾರ್ಯಕರ್ತರು ಸಂಭ್ರಮಾಚರಣೆ ಮೂಲಕ ಖರ್ಗೆ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್​ ಅಧ್ಯಕ್ಷರು, ನಮ್ಮ ವೀಕ್ಷಕರು ಮೂವರು ಬೆಂಗಳೂರಿಗೆ ತೆರಳಿದ್ದಾರೆ. ಅವರು ತಲುಪಿದ ನಂತರ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಇರುತ್ತದೆ. ಈ ಸಭೆಯ ನಂತರ ಅವರು ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ನೊಂದಿಗೆ ಹಂಚಿಕೊಳ್ಳುತ್ತಾರೆ. ನಂತರ ಹೈಕಮಾಂಡ್ ತನ್ನ ನಿರ್ಧಾರವನ್ನು ಇಲ್ಲಿಂದ ರವಾನಿಸುತ್ತದೆ ಎಂದು ಹೇಳಿದರು.

ಇದೇ ವೇಳೆ, ಕರ್ನಾಟಕದ ಜನತೆ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಜನರು ನಮಗೆ ದಾಖಲೆಯ ಮತಗಳನ್ನು ನೀಡಿದ್ದಾರೆ. ನಾವು ನಮ್ಮ ಸಂಪುಟ ರಚನೆಯ ನಂತರ ನಮ್ಮ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿರುವ ಎಲ್ಲ ಐದು ಭರವಸೆಗಳನ್ನು ನಾವು ಜಾರಿಗೊಳಿಸುತ್ತೇವೆ ಎಂದು ಖರ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್​ ದಿಗ್ವಿಜಯ: ಅದ್ವಿತೀಯ ಸಾಧನೆಯ ಹಿಂದಿನ ರೂವಾರಿ ಇವರೇ ಅಂತೆ!

ABOUT THE AUTHOR

...view details