ನವದೆಹಲಿ:ಕೋವಿಡ್ ಬಳಿಕದ ಸಮಸ್ಯೆಗೆ ತುತ್ತಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ದಾರೆ ಎಂದು ರಾಜ್ಯಸಭೆ ನೂತನ ಸದಸ್ಯ ಜೈರಾಂ ರಮೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸೋನಿಯಾರನ್ನು ವಾರದ ಹಿಂದೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಕೆಳ ಶ್ವಾಸನಾಳದಲ್ಲಿ ಫಂಗಸ್ ಸೋಂಕು ಕಾಣಿಸಿಕೊಂಡಿದ್ದು, ಅಗತ್ಯವಾದ ಎಲ್ಲ ರೀತಿಯ ಆರೋಗ್ಯ ತಪಾಸಣೆಗಳನ್ನು ಮಾಡಲಾಗಿದೆ.