ನವದೆಹಲಿ: ಕೊರೊನಾ ಸೋಂಕಿನಿಂದ ಬಾಧಿತರಾಗಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಂಡಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೊರೊನಾ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವುದಾಗಿ ತಿಳಿದು ಬಂದಿದೆ. ಮೂಗಿನಿಂದ ರಕ್ತಸ್ರಾವವಾದ ನಂತರ ಸೋನಿಯಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಬಾಧಿತರಾಗಿದ್ದಾರೆ ಎಂದು ದೃಢಪಟ್ಟಿದೆ.
ಕೊರೊನಾ ವೈರಸ್ ಸೋಂಕು ತಗುಲಿದ ನಂತರ ಸೋನಿಯಾರ ಕೆಳ ಶ್ವಾಸನಾಳದಲ್ಲಿ ಫಂಗಲ್ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅಗತ್ಯವಾದ ಎಲ್ಲ ರೀತಿಯ ಆರೋಗ್ಯ ತಪಾಸಣೆಗಳನ್ನು ಮಾಡಲಾಗಿದ್ದು, ಕೊರೊನಾ ನಂತರದ ಆರೋಗ್ಯ ಸಮಸ್ಯೆಗಳು ಹಾಗೂ ಫಂಗಲ್ ಸೋಂಕು ಎರಡಕ್ಕೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.