ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿದ ಬೆನ್ನಲ್ಲೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಇವಿಎಂಗಳ ಅಸಮರ್ಪಕ ಕಾರ್ಯ ನಿರ್ವಹಣೆಯೇ ಪಕ್ಷದ ಸೋಲಿಗೆ ಕಾರಣ ಎಂದು ಆರೋಪಿಸಿದರು.
ಈಟಿವಿ ಭಾರತದೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ, ದೇಶಾದ್ಯಂತ ಜನರು ಸಂಕಷ್ಟದಲ್ಲಿದ್ದಾರೆ, ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ, ಆರ್ಥಿಕತೆ ಕುಸಿಯುತ್ತಿದೆ, ಬೆಲೆ ಏರಿಕೆಯಿಂದ ಸಾಮಾನ್ಯ ಜನ ಕಂಗೆಟ್ಟಿದ್ದಾರೆ. ಆದರೆ, ಬಿಜೆಪಿ 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿಕೊಳ್ಳುತ್ತಿದೆ. ಹಾಗಾಗಿ, ಅದರ ಹಿಂದಿನ ಕಾರಣವನ್ನು ನಾವು ಮರುಚಿಂತನೆ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಒತ್ತಾಯಿಸಿದರು.