ನವದೆಹಲಿ :ಮುಂಬರುವ ಪಂಚರಾಜ್ಯ ಚುನಾವಣೆ ಹಿನ್ನೆಲೆ ಕಾಂಗ್ರೆಸ್, ಮೂರು ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 144 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಛತ್ತೀಸ್ಗಢದಲ್ಲಿ 30 ಅಭ್ಯರ್ಥಿಗಳ ಹಾಗೂ ತೆಲಂಗಾಣದಲ್ಲಿ 55 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವರಾತ್ರಿಯ ಸುಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ.
ಕಾಂಗ್ರೆಸ್ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕಾಂಗ್ರೆಸ್ ಇಂದು ಮಧ್ಯ ಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ ಪೈಕಿ 144 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೆಲಂಗಾಣದ 90 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಛತ್ತೀಸ್ಗಢದ 90 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ, ಪ್ರದೇಶ್ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥ ಕಮಲ್ನಾಥ್ ಅವರು ಛಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಡಾ. ಗೋವಿಂದ್ ಸಿಂಗ್ ಅವರು ಲಹರಾ ಕ್ಷೇತ್ರದಿಂದ ಹಾಗೂ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಪುತ್ರ ಜೈವರ್ಧನ್ ಸಿಂಗ್ ಅವರು ರಾಘೋಗಡ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.