ಕರ್ನಾಟಕ

karnataka

ETV Bharat / bharat

ಮರಣದಂಡನೆಗೆ ಒಳಗಾಗಿರುವ ನೌಕಾಪಡೆ ಮಾಜಿ ಸಿಬ್ಬಂದಿ ಬಿಡುಗಡೆಗೆ ಕ್ರಮ ಕೈಗೊಳ್ಳಿ: ಭಾರತ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ - ಕಾನ್ಸುಲರ್ ಮತ್ತು ಕಾನೂನು ನೆರವು

ಭಾರತೀಯ ನೌಕಾಪಡೆ ಸಿಬ್ಬಂದಿಯ ಸಹಾಯಕ್ಕೆ ಭಾರತ ಸರ್ಕಾರ ಧಾವಿಸಿ, ಅವರನ್ನ ಬಿಡುಗಡೆಗೊಳಿಸಲು ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷ ನಂಬುತ್ತದೆ ಎಂದು ಜೈರಾಂ ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Congress responds on death penalty to former Indian Navy personnel in Qatar
ಮರಣದಂಡನೆಗೆ ಒಗಗಾಗಿರುವ ನೌಕಾಪಡೆ ಮಾಜಿ ಸಿಬ್ಬಂದಿ ಬಿಡುಗಡೆ ಕ್ರಮ ಕೈಗೊಳ್ಳಿ: ಭಾರತ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ

By ETV Bharat Karnataka Team

Published : Oct 27, 2023, 7:54 AM IST

ನವದೆಹಲಿ: ಕತಾರ್‌ನಲ್ಲಿ ಎಂಟು ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವ ಬಗ್ಗೆ ಕಾಂಗ್ರೆಸ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಬಿಡುಗಡೆ ಮಾಡಲು ಕೇಂದ್ರವು ಕತಾರ್ ಸರ್ಕಾರದೊಂದಿಗಿನ ರಾಜತಾಂತ್ರಿಕ ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ತಮ್ಮ ಪಕ್ಷ ನಿರೀಕ್ಷಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಮಾಜಿ ಅಧಿಕಾರಿಗಳಿಗೆ ಶಿಕ್ಷೆ ಕಾಂಗ್ರೆಸ್​ ಕಳವಳ: ಸಹಾಯಕ್ಕೆ ಧಾವಿಸುವಂತೆ ಕರೆ -ಸಾಮಾಜಿಕ ಜಾಲತಾಣ ಎಕ್ಸ್‌(ಈ ಹಿಂದಿನ ಟ್ವಿಟರ್) ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಕಾಂಗ್ರೆಸ್​​ನ ಹಿರಿಯ ನಾಯಕ ಜೈರಾಮ್ ರಮೇಶ್, "ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಕತಾರ್‌ನಲ್ಲಿ ನಡೆದ ಅತ್ಯಂತ ಗೊಂದಲದ ಬೆಳವಣಿಗೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅತ್ಯಂತ ದುಃಖ, ಸಂಕಟ ಮತ್ತು ಆಘಾತದಿಂದ ಕೂಡಿದೆ ಎಂಬುದನ್ನು ಗಮನಿಸಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಆಶಿಸುತ್ತದೆ ಮತ್ತು ನಿರೀಕ್ಷಿಸುತ್ತದೆ. ಕತಾರ್ ಸರ್ಕಾರದೊಂದಿಗೆ ಭಾರತವು ತನ್ನ ರಾಜತಾಂತ್ರಿಕ ಮತ್ತು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ, ಅವರ ರಕ್ಷಣಗೆ ಧಾವಿಸುವುದನ್ನು ಖಚಿತ ಪಡಿಸಿಕೊಳ್ಳಲು ಕಾಂಗ್ರೆಸ್​ ಬಯಸುತ್ತದೆ‘‘ ಎಂದಿದ್ದಾರೆ.

ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಯನ್ನು ಕತಾರ್ ಸರ್ಕಾರವು ಶೀಘ್ರವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರವು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್​ ಮನವಿ ಮಾಡಿದ್ದಾರೆ. ಮರಣದಂಡನೆಗೆ ಗುರಿಯಾದ ಭಾರತೀಯ ಪ್ರಜೆಗಳೆಲ್ಲರೂ ಅಲ್ ದಹ್ರಾ ಕಂಪನಿಯ ಉದ್ಯೋಗಿಗಳು. ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿ ಅವರನ್ನು ಬಂಧಿಸಲಾಗಿತ್ತು.

ಎಲ್ಲ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದ ವಿದೇಶಾಂಗ ಇಲಾಖೆ:ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಭಾರತೀಯ ಪ್ರಜೆಗಳ ಬಿಡುಗಡೆಗೆ ಎಲ್ಲಾ ಕಾನೂನು ಮಾರ್ಗಗಳನ್ನು ಹುಡುಕಲಾಗುವುದು ಮತ್ತು ಸಾಧ್ಯ ಇರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೇಳಿದೆ. ಅವರಿಗೆ ಎಲ್ಲ ಕಾನ್ಸುಲರ್ ಮತ್ತು ಕಾನೂನು ನೆರವು ನೀಡುವುದಾಗಿ ವಿದೇಶಾಂಗ ಇಲಾಖೆ ಇದೇ ವೇಳೆ ಭರವಸೆ ನೀಡಿದೆ. "ನಾವು ಕತಾರಿ ಅಧಿಕಾರಿಗಳೊಂದಿಗೆ ತೀರ್ಪಿನ ಬಗ್ಗೆ ಚರ್ಚಿಸುತ್ತೇವೆ. ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: 8 ಮಂದಿ ಭಾರತೀಯರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕತಾರ್ ಕೋರ್ಟ್‌: ಆಘಾತ ವ್ಯಕ್ತಪಡಿಸಿದ ವಿದೇಶಾಂಗ ಸಚಿವಾಲಯ

For All Latest Updates

TAGGED:

ABOUT THE AUTHOR

...view details