ನವದೆಹಲಿ:ಮುಂದಿನ ವರ್ಷ ನಡೆಯುವ ಪಂಜಾಬ್ ವಿಧಾನಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್ 'ಒಂದು ಕುಟುಂಬಕ್ಕೆ ಒಂದೇ ಟಿಕೆಟ್' ನಿಯಮವನ್ನು ಅನುಸರಿಸಲು ಮುಂದಾಗಿದೆ. ವಂಶ ರಾಜಕಾರಣದ ಅಪವಾದದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಪಂಜಾಬ್ನಲ್ಲಿ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡುವ ನಿಯಮ ಜಾರಿಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪಂಜಾಬ್ನಲ್ಲಿ ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಎಲ್ಲರೊಂದಿಗೆ ಸಮಾಲೋಚಿಸಲಾಗುವುದು ಎಂದು ತಿಳಿಸಿದರು.