ಕರ್ನಾಟಕ

karnataka

ETV Bharat / bharat

ದೇಶದ ಕೋವಿಡ್​ ಪರಿಸ್ಥಿತಿ ಚರ್ಚಿಸಲು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳು, ಇತರ ಖಾಯಂ ಆಹ್ವಾನಿತರು ಮತ್ತು ಪಕ್ಷದ ಉಸ್ತುವಾರಿಗಳು ಭಾಗವಹಿಸಿದ್ದರು.

Congress
Congress

By

Published : Apr 17, 2021, 2:22 PM IST

Updated : Apr 17, 2021, 7:39 PM IST

ನವದೆಹಲಿ:ಕೊರೊನಾ ವೈರಸ್ ಪ್ರಕರಣಗಳ ತೀವ್ರ ಏರಿಕೆಯ ಮಧ್ಯೆಯೂ ಕಾಂಗ್ರೆಸ್​ನ ವರಿಷ್ಠರು ವರ್ಚುಯಲ್​ ಸಭೆ ನಡೆಸಿ ದೇಶದ ಕೋವಿಡ್​-19 ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಾದ ಕ್ರಮಗಳ ಕುರಿತು ಚರ್ಚೆ ಪ್ರಾರಂಭಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳು, ಇತರ ಖಾಯಂ ಆಹ್ವಾನಿತರು ಮತ್ತು ಪಕ್ಷದ ಉಸ್ತುವಾರಿಗಳು ಭಾಗವಹಿಸಿದ್ದರು.

ಸಿಡಬ್ಲ್ಯುಸಿ ದೇಶದಲ್ಲಿ ಪ್ರಸ್ತುತ ಕೋವಿಡ್​ -19 ಪರಿಸ್ಥಿತಿ ಮತ್ತು ವೈರಸ್ ಮತ್ತಷ್ಟು ಹರಡುವುದನ್ನು ಪರೀಕ್ಷಿಸಲು ತುರ್ತಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಕಾಂಗ್ರೆಸಿನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿ, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಬಡ ಹಾಗೂ ತುಳಿತಕ್ಕೊಳಗಾದ ವರ್ಗಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಎಲ್ಲರಿಗೂ ಲಸಿಕೆಗಳನ್ನು ನೀಡುವಂತೆ ಸರ್ಕಾರವನ್ನು ಕೇಳುವ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆಯಿದೆ.

ಕೋವಿಡ್​-19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳ ಬಗ್ಗೆ ಕಾಂಗ್ರೆಸ್ ಟೀಕಿಸಿದೆ. ಇತ್ತೀಚೆಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೋವಿಡ್​ -19 ವಿರುದ್ಧ ವ್ಯಾಕ್ಸಿನೇಷನ್ ಡ್ರೈವ್ ವಿಸ್ತರಿಸಬೇಕೆಂದು ಕೋರಿದ್ದರು.

Last Updated : Apr 17, 2021, 7:39 PM IST

ABOUT THE AUTHOR

...view details