ಹೈದರಾಬಾದ್:ಕೊರೊನಾ ಎರಡನೇ ಅಲೆಗೆ ಸಿಲುಕಿ ಜನರು ಪರದಾಡುತ್ತಿರಬೇಕಾದರೆ, ಗಾಯದ ಮೇಲೆ ಬರೆ ಎಳೆದಂತೆ ಇಂಧನ ಬೆಲೆ ಗಗನಕ್ಕೆ ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಿಸದ ಕೇಂದ್ರ ಸರ್ಕಾರದ ವಿರುದ್ಧ ಜೂನ್ 11ರಂದು ದೇಶಾದ್ಯಂತ ಪೆಟ್ರೋಲ್ ಪಂಪ್‌ಗಳ ಮುಂದೆ ಪ್ರತಿಭಟಿಸಲು ಕಾಂಗ್ರೆಸ್ ಮುಂದಾಗಿದೆ.
ರಾಜಸ್ಥಾನ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ ರಾಜ್ಯಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 100 ರೂ.ಗಳಿಗಿಂತ ಹೆಚ್ಚಾಗಿದೆ.
ಕಳೆದ ವರ್ಷ ಜೂನ್ನಲ್ಲಿ ಪೆಟ್ರೋಲ್ ಲೀ.ಗೆ 74.93 ರೂ. ಇತ್ತು. ಆದ್ರೆ ಒಂದೇ ವರ್ಷದಲ್ಲಿ 25.07 ರೂ. ಹೆಚ್ಚಳವಾಗಿದೆ. 2014ರಲ್ಲಿ 87 ರೂ.ಗೆ ಏರಿಕೆಯಾಗಿದ್ದು, ಆ ಬಳಿಕ ಇಳಿಕೆ ಕಂಡಿತ್ತು.