ಶಿಮ್ಲಾ(ಹಿಮಾಚಲ ಪ್ರದೇಶ):ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರದ ಕೊನೆಯ ದಿನವಾದ ಗುರುವಾರ ಶಿಮ್ಲಾದಲ್ಲಿ ಬಿಜೆಪಿ ನಾಯಕಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಕಾಂಗ್ರೆಸ್ ಮಹಿಳಾ ವಿಭಾಗದ ಸ್ಥಳೀಯ ಕಾರ್ಯಕರ್ತರು ಸೆಲ್ಫಿ ತೆಗೆದುಕೊಂಡಿದ್ದು ಗಮನ ಸೆಳೆಯಿತು.
ನ.12 ರಂದು ನಡೆಯುವ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಿರ್ಮಲಾ ರಾಜ್ಯದ ರಾಜಧಾನಿಯಲ್ಲಿದ್ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆ ಶಿಮ್ಲಾ ಕ್ಲಬ್ ಬಳಿ ಮಾಲ್ ರೋಡ್ ಮೂಲಕ ಹಾದು ಹೋಗುತ್ತಿದ್ದಾಗ ಕೈ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆಯನ್ನು ನೋಡಿದರು.