ಚಂಡೀಗಢ (ಪಂಜಾಬ್): ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬಸ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.
ಸಿಧು ಪದಗ್ರಹಣಕ್ಕೆ ತೆರಳುತ್ತಿದ್ದ ಬಸ್ ಅಪಘಾತ: ಐವರ ದುರ್ಮರಣ.. ಹಲವರ ಸ್ಥಿತಿ ಗಂಭೀರ! - ಪಂಜಾಬ್ನಲ್ಲಿ ಅಪಘಾತ
ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಧು ಪದಗ್ರಹಣಕ್ಕೆ ತೆರಳುತ್ತಿದ್ದ ಬಸ್ ಅಪಘಾತ
ಮೊಗಾದ ಲೋಕರಾ ಗ್ರಾಮದ ಬಳಿ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದು, ಸ್ಥಳೀಯರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.