ಕರ್ನಾಟಕ

karnataka

ETV Bharat / bharat

ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ... ಹೈದರಾಬಾದ್​​ನಲ್ಲಿ ಇಂದಿನಿಂದ ಕೈ ಸಿಡಬ್ಲ್ಯೂಸಿ ಮೀಟಿಂಗ್​

ಸೆಪ್ಟೆಂಬರ್ 16, 2023 ರಂದು ಹೈದರಾಬಾದ್‌ನಲ್ಲಿ ಮಹತ್ವದ ಕಾಂಗ್ರೆಸ್​​​​​ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಇದಕ್ಕಾಗಿ ಹೈದರಾಬಾದ್​​​ ತುಂಬೆಲ್ಲ ಕಾಂಗ್ರೆಸ್​ ಬ್ಯಾನರ್​ ಬಂಟಿಂಗ್​ ಗಳನ್ನು ಅಳವಡಿಸಲಾಗಿದೆ. ಮುಂಬರುವ ಐದು ರಾಜ್ಯಗಳ ಚುನಾವಭೆ ಹಿನ್ನೆಯಲ್ಲಿ ಇಂದಿನ ಈ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.

congress-working-commitee-meet
ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ... ಹೈದರಾಬಾದ್​​ನಲ್ಲಿ ಇಂದು ಕೈ ಸಿಡಬ್ಲ್ಯೂಸಿ ಮೀಟಿಂಗ್​

By ETV Bharat Karnataka Team

Published : Sep 16, 2023, 6:35 AM IST

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಮಾರ್ಗದರ್ಶನದಲ್ಲಿ ಚರ್ಚಿಸಲಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗಳ ಬಗ್ಗೆ ಎರಡು ದಿನಗಳ ಕಾಲ ನಡೆಯುವ ಚಿಂತನ-ಮಂಥನದ ಪ್ರಮುಖ ಅಜೆಂಡಾ ಆಗಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳ ನಡುವೆ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ, ಕಲಹ ಪೀಡಿತ ಮಣಿಪುರದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಉದ್ವಿಗ್ನತೆ. ಅದಾನಿ ಗ್ರೂಪ್ ವಿರುದ್ಧದ ಇತ್ತೀಚಿನ ಆರೋಪಗಳು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿ ಸೇರಿದಂತೆ ಇನ್ನಿತರ ವಿಷಯಗಳು ಸಿಡಬ್ಲ್ಯುಸಿ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಶನಿವಾರ, ಖಾಯಂ ಮತ್ತು ವಿಶೇಷ ಆಹ್ವಾನಿತರು ಸೇರಿದಂತೆ 84 ಸಿಡಬ್ಲ್ಯೂಸಿ ಸದಸ್ಯರು ಮತ್ತು ನಾಲ್ಕು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಿಡಬ್ಲ್ಯುಸಿ ಸಭೆಗೆ ಹಾಜರಾಗಲಿದ್ದಾರೆ. ಕರ್ನಾಟಕದಲ್ಲಿ ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್​ ಹಾಗೂ ಪಕ್ಷದ ಇನ್ನಿತರ ಹಿರಿಯ ನಾಯಕರು ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 17 ರಂದು CWC ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (PCC)ಯ ಮುಖ್ಯಸ್ಥರು ಸೇರಿ 147 ಪಕ್ಷದ ಸದಸ್ಯರು ಭಾಗವಹಿಸುತ್ತಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರು ಸಹ ಈ ಸಭೆಯ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.

ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರಿ ಆಡಳಿತ ನಡೆಸಿರುವ ಬಿಆರ್​​​ಎಸ್​ ಪಕ್ಷವನ್ನು ಸೋಲಿಸಿ ಅಧಿಕಾರಕ್ಕೆ ಬರಲು ಕಾಂಗ್ರೆಸ್​ ಭರ್ಜರಿ ರಣತಂತ್ರ ರೂಪಿಸುವ ಸಾಧ್ಯತೆ ಇದೆ. ಇನ್ನು ಹೈದರಾಬಾದ್‌ನ ಹೊರವಲಯದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ನಡೆಸುವುದು ಮಾತ್ರವಲ್ಲದೇ ಕರ್ನಾಟಕದ ರೀತಿಯಲ್ಲಿ ಭರವಸೆಗಳನ್ನು ನೀಡುವುದು ಕಾಂಗ್ರೆಸ್​​ನ ಪ್ಲಾನ್​ ಆಗಿದೆ.

ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸುವ ನಿಟ್ಟಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎರಡು ಡಜನ್‌ಗಿಂತಲೂ ಹೆಚ್ಚು ಪಕ್ಷಗಳು ಒಗ್ಗೂಡಿ ಇಂಡಿಯಾ ಮೈತ್ರಿ ಕೂಟ ರಚನೆ ಆದ ಬಳಿಕ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಮೀಟಿಂಗ್​ ಇದಾಗಿದೆ. ಅದರಲ್ಲೂ ಹೈದರಾಬಾದ್​ನಲ್ಲಿ ನಡೆಯುತ್ತಿರುವುದು ಇನ್ನೂ ವಿಶೇಷ.

ಇದನ್ನು ಓದಿ:ಪ್ರಧಾನಿ ಎದುರು ಮಾತನಾಡುವ ಧೈರ್ಯವಿಲ್ಲದ ಬಿಜೆಪಿಗರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ABOUT THE AUTHOR

...view details