ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಅಡಿ ನಗರ ಪ್ರದೇಶಗಳಲ್ಲಿ 1,68,606 ಹೊಸ ಮನೆಗಳ ನಿರ್ಮಾಣಕ್ಕೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇಂದು ಅನುಮೋದನೆ ನೀಡಿದೆ.
ಇಂದು ನಡೆದ ಕೇಂದ್ರ ಮಂಜೂರಾತಿ ಮತ್ತು ಉಸ್ತುವಾರಿ ಸಮಿತಿಯ (ಸಿಎಸ್‌ಎಂಸಿ) 52ನೇ ಸಭೆಯಲ್ಲಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಸಭೆಯಲ್ಲಿ 14 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಭಾಗವಹಿಸಿದ್ದವು.
ಈಗಾಗಲೇ 70 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, 41 ಲಕ್ಷಕ್ಕೂ ಹೆಚ್ಚು ಮನೆಗಳ ಕಾಮಗಾರಿ ಪೂರ್ಣಗೊಂಡಿವೆ. ಭೂಮಿ, ವಲಸೆ ಸೇರಿದಂತೆ ಕೆಲ ಸಮಸ್ಯೆಗಳಿಂದಾಗಿ ಯೋಜನೆಯ ಪರಿಷ್ಕರಣೆಗಾಗಿ ರಾಜ್ಯಗಳು ಪ್ರಸ್ತಾಪಗಳನ್ನು ಮಂಡಿಸಿದ್ದವು.