ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಸ್ಫೋಟಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಶಾಶ್ವತವಾಗಿ ವಜಾ ಮಾಡಲಾಗಿದೆ.
ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲೇಖಿಸಿ ಮುಂಬೈ ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಮುಂಬೈನಲ್ಲಿರುವ ಅಂಬಾನಿಯ ನಿವಾಸದ ಬಳಿ ಕಳೆದ ಕೆಲ ತಿಂಗಳ ಹಿಂದೆ ಜಿಲೆಟಿನ್ ತುಂಬಿಕ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಚಿನ್ ವಾಜೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.
ಇದನ್ನೂ ಓದಿ:ಗಾರೆ ಕೆಲಸಗಾರನ ಕುತ್ತಿಗೆಗೆ ಕಚ್ಚಿ ಕೊಂದ ನಾಯಿ
ಕಾರು ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಕೆಲವೇ ದಿನಗಳಲ್ಲಿ, ಮಾಲೀಕ ಮನ್ಸುಖ್ ಹಿರೇನ್ ಮೃತದೇಹ ಮುಂಬೈ ಬಳಿಯ ಕ್ವಾರಿಯೊಂದರಲ್ಲಿ ಪತ್ತೆಯಾಗಿತ್ತು. ಸದ್ಯ ಅಧಿಕಾರಿಗಳು ಈ ಪ್ರಕರಣದ ವಿಚಾರಣೆಯನ್ನೂ ನಡೆಸುತ್ತಿದ್ದಾರೆ.