ಭೋಪಾಲ್(ಮಧ್ಯಪ್ರದೇಶ):ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಡಿಯೋ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ರಾಜಾ ಪಟೇರಿಯಾ ವಿರುದ್ಧ ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಅವರು ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜಾ ತಮ್ಮ ವಿವರಣೆ ನೀಡಿದ್ದಾರೆ.
ರಾಜಾ ಪಟೇರಿಯಾ ಹೇಳಿದ್ದೇನು?: 'ಪ್ರಧಾನಿ ಮೋದಿಯವರು ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ. ಅಲ್ಲದೇ ದಲಿತ, ಬುಡಕಟ್ಟು, ಅಲ್ಪಸಂಖ್ಯಾತರ ಜೀವಕ್ಕೆ ಅಪಾಯವಿದೆ. ಆದ್ದರಿಂದ ಸಂವಿಧಾನ ಉಳಿಸಬೇಕೆಂದಾದರೆ ಮೋದಿಯವರನ್ನು ಹತ್ಯೆ ಮಾಡಬೇಕು' ಎಂದು ಬಹಿರಂಗ ಸಭೆಯಲ್ಲಿ ಹೇಳಿದ್ದರು. 'ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆ ರೀತಿಯಾಗಿ ನಾನು ಏನನ್ನೂ ಹೇಳಿಲ್ಲ' ಎಂದು ವಿವಾದದ ನಡುವೆ ರಾಜಾ ಸ್ಪಷ್ಟನೆ ಕೊಟ್ಟಿದ್ದಾರೆ.