ಬೆಂಗಳೂರು:ಕೂನೂರು ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರೊಂದಿಗೆ ಹುತಾತ್ಮರಾದ ಲ್ಯಾನ್ಸ್ ನಾಯಕ್ ಬಿ.ಸಾಯಿ ತೇಜ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಿಂದ ರಸ್ತೆ ಮಾರ್ಗವಾಗಿ ಆಂಧ್ರದ ಚಿತ್ತೂರಿಗೆ ರವಾನಿಸಲಾಗುತ್ತಿದೆ.
ಇದಕ್ಕೂ ಮುನ್ನ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಸಾಯಿತೇಜ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಗಿತ್ತು. ಇಂದು ಬೆಳಗ್ಗೆಯೂ ಕಮಾಂಡ್ ಆಸ್ಪತ್ರೆಯಲ್ಲಿ ಗೌರವ ಸಲ್ಲಿಸಲಾಗಿದ್ದು, ಚಿತ್ತೂರಿಗೆ ರವಾನೆ ಮಾಡಲಾಗಿದೆ.