ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) :ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಅನ್ವರ್ ಖಾನ್ ನಿವಾಸದ ಮೇಲೆ ಉಗ್ರರ ದಾಳಿ ನಡೆದಿದ್ದು, ಕಾನ್ಸ್ಟೇಬಲ್ ಒಬ್ಬರು ಹುತಾತ್ಮರಾಗಿದ್ದಾರೆ. ನಿಷೇಧಿತ ಭಯೋತ್ಪಾದಕ ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಭಯೋತ್ಪಾದಕರು ಕೃತ್ಯವೆಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ನೌಗಮ್ ಶ್ರೀನಗರದ ಆರಿಬಾಗ್ ಪ್ರದೇಶದಲ್ಲಿ ಭಯೋತ್ಪಾದನಾ ದಾಳಿ ನಡೆದ ಬಗ್ಗೆ ಶ್ರೀನಗರ ಪೊಲೀಸರಿಗೆ ಮಾಹಿತಿ ಬಂದಿದೆ. ಹಿರಿಯ ಪೊಲೀಸರು ಮತ್ತು ಸಿಎಪಿಎಫ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ ಪರಿಶೀಲಿಸಿದ್ದಾರೆ. ನಾಲ್ವರು ಭಯೋತ್ಪಾದಕರ ಗುಂಪು ದಾಳಿ ನಡೆಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.