ನವದೆಹಲಿ:ಭಾರತದಲ್ಲಿ ಕೋವಿಡ್ ಪ್ರಕರಣಗಳು ಕಳೆದ ಮೂರು ದಿನಗಳಿಂದ ಇಳಿಕೆಯಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 13,734 ಹೊಸ ಕೇಸ್, 27 ಸಾವುಗಳು ಸಂಭವಿಸಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,40,50,009 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಗುಡ್ನ್ಯೂಸ್ ಎಂದರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಸದ್ಯ 1,39,792 ಕೇಸ್ಗಳು ಮಾತ್ರ ಸಕ್ರಿಯವಾಗಿವೆ. ದೇಶಾದ್ಯಂತ ಈವರೆಗೆ ಒಟ್ಟು 4,33,83,787 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ ಕಂಡಿದ್ದರೆ, ಚೇತರಿಕೆ ದರ ಶೇ. 98.49 ರಷ್ಟಿದೆ. ನಿತ್ಯದ ಪಾಸಿಟಿವಿಟಿ ದರ ಶೇ.3.34 ಇದ್ದರೆ, ವಾರದ ಪಾಸಿಟಿವಿಟಿ ದರ 4.79 ಪ್ರತಿಶತವಿದೆ.