ಹೈದರಾಬಾದ್: ಕೊರೊನಾ ಎರಡನೇ ಅಲೆಯಿಂದ ಚೇತರಿಸಿಕೊಳ್ಳಲು ಭಾರತಕ್ಕೆ ಬಹಳ ಸಮಯ ಹಿಡಿಯುತ್ತದೆ. ಇದು ಜುಲೈವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಪ್ರಮುಖ ವೈರಾಲಜಿಸ್ಟ್ ಶಾಹಿದ್ ಜಮೀಲ್ ಹೇಳಿದ್ದಾರೆ.
ಆನ್‌ಲೈನ್ ವೇದಿಕೆಯಾಗಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಸ್ತುತ ಪ್ರಕರಣಗಳ ಹೆಚ್ಚಳವು ಸ್ಥಿರವಾಗಿ ಮುಂದುವರೆಯುತ್ತಿದೆ. ಮೊದಲ ಅಲೆಗೆ ಹೋಲಿಸಿದರೆ, ಎರಡನೇ ಅಲೆಯಿಂದ ಹೊರಬರಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.