ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ 2,64,202 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 1,09,345 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,48,24,706 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 95.20ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು 12,72,073 ಮಂದಿ ಇದ್ದು, ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 3.48ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ. ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 14.78ರಷ್ಟಿದೆ. ಕಳೆದ 24 ಗಂಟೆಯಲ್ಲಿ 315 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4,48,5350 ಮಂದಿ ಮೃತಪಟ್ಟಿದ್ದಾರೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್:ಈವರೆಗೆ ಸುಮಾರು 69,73,11,627 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಗುರುವಾರ ಒಂದೇ ದಿನ 18,86,935 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,55,39,81,819 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಗುರುವಾರ ಒಂದೇ ದಿನದಲ್ಲಿ 73,08,669 ಮಂದಿಗೆ ಲಸಿಕೆ ನೀಡಲಾಗಿದೆ.
ಒಮಿಕ್ರಾನ್ ಸೋಂಕು: ದೇಶದಲ್ಲಿ ಈವರೆಗೆ 5,753 ಮಂದಿಯಲ್ಲಿ ಒಮಿಕ್ರಾನ್ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.