ಲಖನೌ( ಉತ್ತರ ಪ್ರದೇಶ) : ಕೋವಿಡ್ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್‌ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.
ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು ಸಂಗ್ರಹಿಸಿ ಲಖನೌದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜ್ಯುವೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ( ಎಸ್ಜಿಪಿಐ)ನ ಲ್ಯಾಬ್ನಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.
ಈ ವೇಳೆ ಕೊಳಚೆ ನೀರಿನಲ್ಲಿ ಕೋವಿಡ್ ವೈರಸ್ ಇರುವುದು ದೃಢಪಟ್ಟಿದೆ. ಈ ಬಗ್ಗೆ ತಜ್ಞ ವೈದ್ಯರೂ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.