ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 47,092 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3,28,57,937ಕ್ಕೇರಿದೆ. 35,181 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾದವರ ಸಂಖ್ಯೆ 3,20,28,825ಅಗಿದೆ.
ನಿಲ್ಲದ ಕೋವಿಡ್ ಅಬ್ಬರ: ಕಳೆದ 24 ಗಂಟೆಗಳಲ್ಲಿ 47,092 ಜನರಿಗೆ ವಕ್ಕರಿಸಿರುವ ವೈರಸ್
ದೇಶದಲ್ಲಿ ಕೋವಿಡ್ ಅಬ್ಬರ ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹೊಸದಾಗಿ 47,092 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3,28,57,937 ಕ್ಕೇರಿದೆ.
ಕೋವಿಡ್
ನಿನ್ನೆ ಒಂದೇ ದಿನ ವೈರಸ್ಗೆ 509 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4,39,529 ಕ್ಕೆ ಏರಿದೆ. ಸದ್ಯ ದೇಶದಲ್ಲಿ 3,89,583 ಸಕ್ರಿಯ ಪ್ರಕರಣಗಳಿವೆ. ನಿನ್ನೆ 81,09,244 ವ್ಯಾಕ್ಸಿನ್ ಡೋಸ್ಗಳನ್ನು ನೀಡಲಾಗಿದ್ದು, ಸೆಪ್ಟೆಂಬರ್ 1 ರವರೆಗೆ 66,30,37,334 ಲಸಿಕೆ ಡೋಸ್ಗಳನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸೆಪ್ಟೆಂಬರ್ 1 ರಂದು 16,84,441 ಸ್ವ್ಯಾಬ್ ಟೆಸ್ಟ್ ಮಾಡಲಾಗಿದ್ದರೆ, ಈವರೆಗೆ 52,48,68,734 ಗಂಟಲು ದ್ರವ ಮಾದರಿಗಳನ್ನು ತಪಾಸಣೆ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.