ಕರ್ನಾಟಕ

karnataka

ETV Bharat / bharat

ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ: ಸಾವಿನ ಸಂಖ್ಯೆ ಮತ್ತೆ ಏರಿಕೆ! - Kerala covid

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾವಿನ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಹೊಸದಾಗಿ 42,766 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಒಂದೇ ದಿನ 1,206 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ ಟೆಸ್ಟ್​ ಮಾಡಿರುವ ವಿವರ
ಕೋವಿಡ್ ಟೆಸ್ಟ್​ ಮಾಡಿರುವ ವಿವರ

By

Published : Jul 10, 2021, 9:47 AM IST

ನವದೆಹಲಿ: ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 42,766 ಜನರಿಗೆ ಕೋವಿಡ್ ದೃಢಪಟ್ಟಿದೆ. ಒಂದೇ ದಿನ 45,254 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ದೇಶದಲ್ಲಿ ಈವರೆಗೆ 3,07,95,716 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,99,33,538 ಮಂದಿ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 1,206 ಮಂದಿ ಕೊನೆಯುಸಿರೆಳೆದಿದ್ದು, ಈವರೆಗೆ 4,07,145 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

ಕೋವಿಡ್ ಟೆಸ್ಟ್​ ಮಾಡಿರುವ ವಿವರ

ದೇಶದಲ್ಲಿ ಒಟ್ಟು 4,55,033 ಸಕ್ರಿಯ ಪ್ರಕರಣಗಳಿವೆ. ಈವರೆಗೆ 42,90,41,970 ಜನರಿಗೆ ಕೋವಿಡ್​ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 19,55,225 ಜನರಿಗೆ ತಪಾಸಣೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ಮಾಹಿತಿ ನೀಡಿದೆ.

ಇದನ್ನೂ ಓದಿ:ಲಾಮ್ಡ್‌ ರೂಪಾಂತರಿ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

ABOUT THE AUTHOR

...view details