ನವದೆಹಲಿ: ಭಾರತದಲ್ಲಿ ಮತ್ತೆ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,930 ಹೊಸ ಕೇಸ್ಗಳು ದೃಢಪಟ್ಟಿವೆ. 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರ 2,771 ಹೊಸ ಸೋಂಕು ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 14,650 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,29,21,977 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,19,457 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,305ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ದರ 0.27% ಇದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಈವರೆಗೆ 86.53 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 4,38,005 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ 98.54 % ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.32% ರಷ್ಟಿದೆ. ವಾರದ ಪಾಸಿಟಿವಿಟಿ ದರ 3.86% ಇದೆ. ರಾಷ್ಟವ್ಯಾಪಿ ಕೋವಿಡ್ ಲಸಿಕಾ ಅಭಿಯಾನದಡಿ ಈವರೆಗೆ 198.33 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.