ಕರ್ನಾಟಕ

karnataka

ETV Bharat / bharat

ಎರಡು ಕುಟುಂಬಗಳ ದುರಂತ ಅಂತ್ಯ: ಐವರು ಮಕ್ಕಳ ಸಮೇತ 9 ಮಂದಿ ಸಾವು - ಆತ್ಮಹತ್ಯೆ

ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

couple-along-with-three-children-found-dead-in-madhya-pradesh
ಎರಡು ಕುಟುಂಬಗಳ ದುರಂತ ಅಂತ್ಯ: ಐವರು ಮಕ್ಕಳ ಸಮೇತ ಒಂಭತ್ತು ಮಂದಿ ಸಾವು

By

Published : Mar 12, 2023, 6:29 PM IST

ಬುರ್ಹಾನ್‌ಪುರ (ಮಧ್ಯಪ್ರದೇಶ): ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತಿ ಮತ್ತು ಮೂವರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಇಲ್ಲಿನ ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದಬಾಲಿಖೂರ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ದುರಂತ ಜರುಗಿದೆ. ಮೃತರನ್ನು ಮನೋಜ್​ ಮತ್ತು ಆತನ ಪತಿ ಹಾಗೂ ಮಕ್ಕಳು ಎಂದು ತಿಳಿದು ಬಂದಿದೆ. ಮನೋಜ್​ ಸಹೋದರ ಹಾಲು ತರಲೆಂದು ಮನೆಯಿಂದ ಹೋಗಿದ್ದರು. ನಂತರ ಮರಳಿ ಮನೆಗೆ ವಾಪಸ್ ಬಂದು ನೋಡುವಷ್ಟರಲ್ಲೇ ಐವರು ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಗುಡಿಸಲಿಗೆ ಬೆಂಕಿ: ಸುಖ ನಿದ್ರೆಯಲ್ಲಿದ್ದ ಮೂವರು ಮಕ್ಕಳು, ದಂಪತಿ ದಾರುಣ ಸಾವು

ಮೃತರ ಮೃತದೇಹ ನೋಡಿ ಆಘಾತಗೊಂಡ ಸಹೋದರನ ಕಿರುಚಾಟ ಕೇಳಿ ಸ್ಥಳೀಯರು ಮನೆಗೆ ದೌಡಾಯಿಸಿದ್ದಾರೆ. ನಂತರ ಈ ಘಟನೆ ಬಗ್ಗೆ ನೇಪಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಪೊಲೀಸರು ಕೂಡ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮನೋಜ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ಕೂಡ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದರು. ಆದರೆ, ಇದರ ನಡುವೆ ಏಕಾಏಕಿ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಪೊಲೀಸ್ ಮೂಲಗಳ ಪ್ರಕಾರ, ಮನೋಜ್ ಮೊದಲಿಗೆ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಇದರ ನಂತರ ಮೂವರು ಮಕ್ಕಳನ್ನೂ ಕೊಂದಿದ್ದಾರೆ. ನಾಲ್ವರನ್ನು ಹತ್ಯೆ ಮಾಡಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಈ ಕಠಿಣ ನಿರ್ಧಾರಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ಕೈಗೊಂಡಿದ್ದಾರೆ.

ಗುಜರಾತ್‌ನಲ್ಲೂ ನಾಲ್ವರು ಸಾವು: ಮತ್ತೊಂದೆಡೆ, ಗುಜರಾತ್‌ನ ನವಸಾರಿ ಜಿಲ್ಲೆಯಲ್ಲೂ ಇಂತಹದ್ದೇ ದುರಂತ ನಡೆದಿದೆ. ರಾವನಿಯಾ ಗ್ರಾಮದ ಮನೆಯೊಂದರಲ್ಲಿ ಭಾನುವಾರ ನಾಲ್ಕು ತಿಂಗಳ ಹೆಣ್ಣು ಮಗು ಮತ್ತು ಆಕೆಯ ಏಳು ವರ್ಷದ ಸಹೋದರಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಚುನಿಲಾಲ್ ಗವಿತ್ (39) ಮತ್ತು ಆತನ ಪತ್ನಿ ಹಾಗೂ ಇಬ್ಬರು ಪುಟ್ಟ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ದಮನ್‌ನ ಆಯುರ್ವೇದಿಕ್ ಕಂಪನಿಯಲ್ಲಿ ಚುನಿಲಾಲ್​ ಕೆಲಸ ಮಾಡುತ್ತಿದ್ದರು. ಈ ಇಬ್ಬರು ಮಕ್ಕಳನ್ನು ಪೋಷಕರು ಕೊಲೆ ಮಾಡಿ ನಂತರ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇಬ್ಬರು ಮಕ್ಕಳ ಶವಗಳು ನೆಲದ ಮೇಲೆ ಬಿದ್ದಿದ್ದವು. ತಂದೆ - ತಾಯಿ ಶವಗಳು ಒಂದೇ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವನ್ಸ್ಡಾ ಪೊಲೀಸ್ ಇನ್ಸ್‌ಪೆಕ್ಟರ್​ ಬಿಎಂ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ:ಮೂರು ಪ್ರತ್ಯೇಕ ರಸ್ತೆ ಅಪಘಾತ.. 14 ಜನರ ದುರ್ಮರಣ

ABOUT THE AUTHOR

...view details