ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರದ ಬಿಲ್ಹೌರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ವರದಿ ಪ್ರಕಾರ ಇದೊಂದು ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯುಪಿಯಲ್ಲಿ ನೇಣಿಗೆ ಶರಣಾದ ದಂಪತಿ... ಕಾರಣ ನಿಗೂಢ! - ಉತ್ತರ ಪ್ರದೇಶದ ಕಾನ್ಪುರದ ಬಿಲ್ಹೌರ್ ಪೊಲೀಸ್ ಠಾಣೆ
ಅನುಮಾನಾಸ್ಪದ ರೀತಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇಂದು ಬೆಳಗ್ಗೆ ದಂಪತಿಯ ಮೃತದೇಹ ಮರದ ಕೊಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ದಂಪತಿ ಬಿಲ್ಹೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಕೆಲ ಸ್ಥಳೀಯರು ಹೊಲಕ್ಕೆ ತೆರಳಿದ್ದ ವೇಳೆ ಮರದಲ್ಲಿ ಶವ ನೇತಾಡುತ್ತಿರುವುದನ್ನ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದುಕೊಳ್ಳಲು ಈಟಿವಿ ಭಾರತ್ ಪ್ರಯತ್ನಿಸಿದಾಗ ಅವರು ಉತ್ತರ ನೀಡಲು ನಿರಾಕರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆತ್ಮಹತ್ಯೆಗೆ ಕಾರಣ ಕಂಡು ಹಿಡಿಯಲಾಗುವುದು ಎಂದು ತಿಳಿಸಿದ್ದಾರೆ.