ನವದೆಹಲಿ/ಮುಂಬೈ :ಅಮರಾವತಿ ಲೋಕಸಭಾ ಸದಸ್ಯೆ ನವನೀತ್ ಕೌರ್ ರಾಣಾ ನೀಡಿರುವ ಜಾತಿ ಪ್ರಮಾಣಪತ್ರವನ್ನು ಬಾಂಬೆ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಇದು ನಕಲಿ ದಾಖಲೆಗಳನ್ನು ಬಳಸಿ ಸೃಷ್ಟಿಸಲಾಗಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಎಂಪಿ ನವನೀತ್ ಕೌರ್ ರಾಣಾ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಜಾತಿ ಪ್ರಮಾಣಪತ್ರ ವಿಚಾರವಾಗಿ ನ್ಯಾಯಮೂರ್ತಿಗಳಾದ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರಿದ್ದ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸಿತು. ರಾಣಾ ಸಲ್ಲಿಸಿರುವ ಜಾತಿ ಪ್ರಮಾಣ ಪತ್ರ ನಕಲಿಯಾಗಿದೆ ಎಂದು ಕೋರ್ಟ್ ತಿಳಿಸಿದೆ.
ಅಲ್ಲದೆ, ರಾಣಾ 2 ಲಕ್ಷ ರೂಪಾಯಿಯನ್ನು ಎರಡು ವಾರಗಳೊಳಗೆ ಮಹಾರಾಷ್ಟ್ರ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಿದೆ. ರಾಣಾ ಮೂಲತಃ ‘ಮೋಚಿ’ ಸಮುದಾಯಕ್ಕೆ ಸೇರಿದವರಾಗಿದ್ದು, ರಾಜಕೀಯ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಪಡೆದಿದ್ದಾರೆ. ಆ ವರ್ಗದ ಅಭ್ಯರ್ಥಿಗೆ ಲಭ್ಯವಿರುವ ವಿವಿಧ ಪ್ರಯೋಜನಗಳನ್ನು ಇವರು ಪಡೆದಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.