ಕರ್ನಾಟಕ

karnataka

ETV Bharat / bharat

ಪೊಲೀಸ್ ಆಯುಕ್ತರಾಗಿ ರಾಕೇಶ್ ಅಸ್ತನಾ ನೇಮಕ ವಿಚಾರ.. ನಾಳೆಗೆ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್ - ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ

ನಿವೃತ್ತಿಗೆ ನಾಲ್ಕು ದಿನ ಇರುವಾಗ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

By

Published : Aug 31, 2021, 3:59 PM IST

ನವದೆಹಲಿ: ಐಪಿಎಸ್ ಅಧಿಕಾರಿ ರಾಕೇಶ್ ಅಸ್ತನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ನೇತೃತ್ವದ ಪೀಠವು ಈ ಆದೇಶ ನೀಡಿದೆ.

ವಿಚಾರಣೆಯ ಸಮಯದಲ್ಲಿ, ವಕೀಲ ಪ್ರಶಾಂತ್ ಭೂಷಣ್ ಅವರು ರಾಕೇಶ್ ಅಸ್ತನಾ ಅವರ ನೇಮಕಾತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕತ್ತರಿಸಿ ಅಂಟಿಸಲಾಗಿದೆ. ಜತೆಗೆ ಅದೇ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಹೇಳಿದರು. ಇದು ಕಾನೂನಿನ ದುರ್ಬಳಕೆಯಾಗಿದ್ದು, ಸರ್ಕಾರವು ಅಥವಾ ಅರ್ಜಿದಾರರು ಈ ವಿಷಯವು ಸುಪ್ರೀಂನಲ್ಲಿದೆ ಎಂದು ಹೇಳಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್​ ಚೇತನ್ ಶರ್ಮಾ, ಈ ಬಗ್ಗೆ ತಮಗೆ ತಿಳಿದಿಲ್ಲ ಎಂದರು. ಆಗ ಭೂಷಣ್​, ತಮ್ಮ ಅರ್ಜಿಯು ಕೇಂದ್ರ ಸರ್ಕಾರದ ವಿರುದ್ಧವಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಾಗ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರದ ಪರವಾಗಿ ಹಾಜರಿದ್ದರು. ಅವರಿಗೆ ವಿಷಯ ತಿಳಿದಿತ್ತು ಎಂದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿತು.

ಆಗಸ್ಟ್ 24 ರ ವಿಚಾರಣೆಯ ಸಮಯದಲ್ಲಿ, ಪ್ರಶಾಂತ್ ಭೂಷಣ್ ಅವರು ದೆಹಲಿ ಪೊಲೀಸ್ ಆಯುಕ್ತರ ಹುದ್ದೆಗೆ ರಾಕೇಶ್ ಅಸ್ತನಾ ಅವರ ನೇಮಕಾತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದ್ದರು. ಆಗಸ್ಟ್ 25 ರಂದು, ಪ್ರಶಾಂತ್ ಭೂಷಣ್ ಅವರ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣವನ್ನು ದೆಹಲಿ ಹೈಕೋರ್ಟ್​ಗೆ ವರ್ಗಾಯಿಸಿತು. ಇದರ ಜತೆಗೆ ಪ್ರಶಾಂತ್ ಭೂಷಣ್​​ಗೆ ಹೈಕೋರ್ಟ್​​ನಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸುವಂತೆ ಸೂಚಿಸಿತ್ತು.

ಆಗಸ್ಟ್ 18 ರಂದು, ದೆಹಲಿ ಪೊಲೀಸ್ ಆಯುಕ್ತರ ಹುದ್ದೆಗೆ ರಾಕೇಶ್ ಅಸ್ತನಾ ಅವರ ನೇಮಕಾತಿಯನ್ನು ಪ್ರಶ್ನಿಸುವ ಅರ್ಜಿ ಬೇರೆ ಯಾವುದೇ ನ್ಯಾಯಾಲಯದಲ್ಲಿ ಬಾಕಿ ಇದೆಯೇ ಎಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ವಿಚಾರಣೆಯ ಸಮಯದಲ್ಲಿ, ಅರ್ಜಿದಾರರು ತಮ್ಮ ಅರ್ಜಿಯನ್ನು ಹೇಗೆ ನಿರ್ವಹಿಸಬಹುದೆಂದು ವಿವರಿಸಲು ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ಕೇಳಿತ್ತು.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನ 9 ನೂತನ ನ್ಯಾಯಮೂರ್ತಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

ವಕೀಲ ಬದ್ಲಾ ಆಲಂ ಅವರು ಐಪಿಎಸ್ ಅಧಿಕಾರಿ ರಾಕೇಶ್ ಅಸ್ತನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.

1984 ರ ಬ್ಯಾಚ್ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತನಾ ಅವರ ನಿವೃತ್ತಿಗೆ ನಾಲ್ಕು ದಿನಗಳ ಮೊದಲು ಜುಲೈ 27 ರಂದು ದೆಹಲಿ ಪೊಲೀಸ್ ಆಯುಕ್ತರನ್ನಾಗಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅವರ ನೇಮಕಾತಿಯು ಸುಪ್ರೀಂ ಕೋರ್ಟ್‌ನ ಪ್ರಕಾಶ್ ಸಿಂಗ್ ಅವರ ನಿರ್ಧಾರದಲ್ಲಿ ಸೂಚಿಸಲಾದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ.

ABOUT THE AUTHOR

...view details