ನವದೆಹಲಿ: ಕುತುಬ್ ಮಿನಾರ್ ಕಾಂಪ್ಲೆಕ್ಸ್‌ನಲ್ಲಿರುವ ಎರಡು ಗಣೇಶನ ವಿಗ್ರಹಗಳನ್ನು ರಾಷ್ಟ್ರೀಯ ವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರಗೊಳಿಸಬೇಕೆಂದು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರ ಭಾರತೀಯ ಪುರಾತತ್ವ ಇಲಾಖೆಗೆ ಪತ್ರ ಬರೆದಿದೆ. ಆದರೆ, ವಿಶ್ವ ಪರಂಪರೆ ತಾಣವೆನಿಸಿದ ಸ್ಥಳದಲ್ಲಿ ಬದಲಾವಣೆ ಮಾಡುವ ಎನ್‌ಎಂಎ ಪ್ರಯತ್ನಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದನ್ನು ಪ್ರಶ್ನೆ ಮಾಡಿ ಸಾಕೇತ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿರುವ ಕೋರ್ಟ್ ಇದೀಗ ಮಹತ್ವದ ನಿರ್ದೇಶನ ನೀಡಿದೆ.
ರಾಷ್ಟ್ರೀಯ ವಸ್ತು ಸಂಗ್ರಹಾಲಯ ಅಥವಾ ಇನ್ನಾವುದೇ ಸ್ಥಳದಲ್ಲಿ ಗಣೇಶನ ವಿಗ್ರಹ ಪ್ರದರ್ಶಿಸಬಾರದು, ಕುತುಬ್ ಮಿನಾರ್ ಸಂಕೀರ್ಣದಲ್ಲೇ ಗೌರಯುತವಾಗಿ ಇರಿಸಬೇಕೆಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಈ ಮೂಲಕ ಅರ್ಜಿದಾರನ ಪರವಾಗಿ ತೀರ್ಪು ನೀಡಿದೆ.