ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ, ಖ್ಯಾತ ವಜ್ರದ ವ್ಯಾಪಾರಿ ನೀರವ್ ಮೋದಿ ಅವರ 500 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯವು (ED) ಬಾಂಬೆ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ಕೋರ್ಟ್ ಅಂಗೀಕರಿಸಿದ್ದು, 500 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಇಡಿಗೆ ಸೂಚಿಸಿದೆ.
ದಕ್ಷಿಣ ಮುಂಬಯಿಯ ಹೃದಯಭಾಗದಲ್ಲಿರುವ ನೀರವ್ ಮೋದಿ ಅವರ ರಿದಮ್ ಹೌಸ್ ವನ್ನು ಸಹ ವಶಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯವು ಮನವಿ ಮಾಡಿದೆ. ಅದರಂತೆ ಅಲಿಬಾಗ್‌ನ ಬಂಗಲೆಯಿಂದ ವಶಪಡಿಸಿಕೊಂಡ ಬೆಲೆಬಾಳುವ ವಸ್ತುಗಳು, 22 ಕಾರುಗಳನ್ನು ಜಪ್ತಿಗೆ ಸೂಚಿಸಲಾಗಿದೆ.
ಇಡಿ ಮನವಿಗೆ ಬುಧವಾರ ವಿಶೇಷ ನ್ಯಾಯಾಲಯವು ಆರ್ಥಿಕ ಅಪರಾಧ ಕಾಯ್ದೆಯಡಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ನೀರವ್ ಮೋದಿ 39 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮೋದನೆ ನೀಡಿದೆ. ನ್ಯಾಯಾಲಯವು ಇದು ಎರಡನೇ ಬಾರಿಗೆ ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಅವಕಾಶ ನೀಡಿದೆ.