ವಾರಾಣಸಿ:ಇಲ್ಲಿನ ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ಅನುಮತಿ ನೀಡಿದ ತ್ವರಿತ ನ್ಯಾಯಾಲಯ ಆದೇಶದ ವಿರುದ್ಧ ಫಿರ್ಯಾದಾರರು ಮತ್ತು ಅಂಜುಮನ್ ಇಂತೇಜಾಮಿಯಾ ಮಸೀದಿ ಸಲ್ಲಿಸಿರುವ ಅರ್ಜಿಯನ್ನು ಉತ್ತರಪ್ರದೇಶ ಹೈಕೋರ್ಟ್ ವಿಚಾರಣೆ ನಡೆಸಿತು. ವಾದ- ಪ್ರತಿವಾದದ ಬಳಿಕ ಮಸೀದಿ ಮತ್ತು ಅರ್ಜಿದಾರ ವಿಎಸ್ ರಸ್ತೋಗಿ ಅವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿ, ಮೇ 9 ರಂದು ವಿಚಾರಣೆ ಮುಂದೂಡಲಾಗಿದೆ.
ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ವಕೀಲ ಮೆರಾಜುದ್ದೀನ್ ಸಿದ್ದಿಕಿ ಮಾತನಾಡಿ, ಅರ್ಜಿ ಆಲಿಸಿದ ಕೋರ್ಟ್ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿದೆ. ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 9 ರಂದು ನಡೆಸಲು ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದರು.
ಓವೈಸಿ ಆಕ್ರೋಶ:ಇನ್ನು ಈ ಬಗ್ಗೆ ಹೈದರಾಬಾದ್ನಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವಿವಾದವನ್ನು ಹುಟ್ಟು ಹಾಕಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಉಭಯ ಕೋಮಿನಲ್ಲಿ ದ್ವೇಷವನ್ನು ಮೂಡಿಸುತ್ತಿದೆ ಎಂದು ಟೀಕಿಸಿದ್ದಾರೆ.
ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991ರ ಪ್ರಕಾರ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ತೊಂದರೆ ಉಂಟು ಮಾಡಬಾರದು ಎಂದು ಹೇಳಿದೆ. ಇದನ್ನು ಭಾರತ ಸರ್ಕಾರ ಕೂಡ ಅಂಗೀಕರಿಸಿದೆ. ಈ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕಡಬೇಕಿತ್ತು. ಆದರೆ, ಬಿಜೆಪಿ ಸರ್ಕಾರ ಇದರಲ್ಲಿ ಮೌನ ವಹಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಓದಿ:ಮಂಟಪದಲ್ಲಿ ತಾಯಿಯ ಪಕ್ಕ ತಂದೆಯ ಮೇಣದ ಪ್ರತಿಮೆ ಕೂರಿಸಿ ಮದುವೆಯಾದ ಮಗ!