ನವದೆಹಲಿ:ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯನ್ನ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ ಎಂಬ ವರದಿ ಹೊರಬಿದ್ದಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಇದೀಗ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ.
12 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಡಿಸಿಜಿಐ ಅನುಮೋದನೆ: ವರದಿ
ದೇಶದಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಇದೀಗ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದನೆ ನೀಡಿದೆ ಎಂಬ ವರದಿ ಬಹಿರಂಗಗೊಂಡಿದೆ.
Covaxin cleared for children
12ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ ಲಸಿಕೆ ನೀಡಲು ಅನುಮೋದನೆ ನೀಡಲಾಗಿದ್ದು, 12 ವರ್ಷದೊಳಗಿನ ಮಕ್ಕಳಿಗೆ ಇದು ಅನ್ವಯ ವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಭಾರತದಲ್ಲಿ ಈಗಾಗಲೇ ಝೈಕೋವಿ-ಡಿ ವ್ಯಾಕ್ಸಿನ್ ಮಕ್ಕಳಿಗೆ ನೀಡಲು ಅನುಮೋದನೆ ನೀಡಲಾಗಿದ್ದು, ಇದೀಗ ದೇಶೀಯ ಲಸಿಕೆ ಕೋವ್ಯಾಕ್ಸಿನ್ಗೆ ಡಿಸಿಜಿಐ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.