ನವದೆಹಲಿ: ಗುಜರಾತ್, ಅಸ್ಸೋಂ ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಲಸಿಕೆಗಳನ್ನು ಪೂರೈಸಲಾಗಿದೆ ಎಂದು ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ.
ಕೋವ್ಯಾಕ್ಸಿನ್ ಲಸಿಕೆ ಸರಬರಾಜು ಸಂಬಂಧ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತ್ ಬಯೋಟೆಕ್ ಸಹ-ಸಂಸ್ಥಾಪಕಿ ಹಾಗೂ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲಾ, ಗುಜರಾತ್, ಅಸ್ಸೋಂ, ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಲಸಿಕೆಗಳನ್ನು ಕಳುಹಿಸಲಾಗಿದೆ. ಕೇರಳ ಹಾಗೂ ಉತ್ತರಾಖಂಡ ರಾಜ್ಯಗಳಿಗೂ ಮುಂದಿನ ದಿನಗಳಲ್ಲಿ ಪೂರೈಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.