ನವದೆಹಲಿ:ಭಾರತ್ ಬಯೋಟೆಕ್ ಸಂಸ್ಥೆ ತಯಾರಿಕೆಯ ಕೋವಾಕ್ಸಿನ್ ಲಸಿಕೆ ಸೋಂಕಿನ ವಿರುದ್ಧದ ಹೋರಾಟದಲ್ಲಿ ಶೇ.77.8ರಷ್ಟು ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಮೂರನೇ ಹಂತದ ಕ್ಲಿನಿಕಲ್ ಪರೀಕ್ಷೆಯಲ್ಲಿ ಖಾತರಿಯಾಗಿದೆ ಎಂದು ತಿಳಿಸಿದೆ.
ಇದಲ್ಲದೆ ಭಾರತದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ರೂಪಾಂತರಿ ಡೆಲ್ಟಾ ವೈರಸ್ ವಿರುದ್ಧ ಶೇ. 65.2ರಷ್ಟು ಪರಿಣಾಮಕಾರಿಯಾಗಿದ್ದು, ತೀವ್ರ ಕೋವಿಡ್ ರೋಗಲಕ್ಷಣದ ವಿರುದ್ಧ ಶೇ.93.4ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕಂಪನಿ ವಿವರಿಸಿದೆ.