ಹೈದರಾಬಾದ್(ತೆಲಂಗಾಣ):ಕೋವ್ಯಾಕ್ಸಿನ್ನ 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕಾಗಿ ಭಾರತ್ ಬಯೋಟೆಕ್ 25,800 ಸ್ವಯಂ ಸೇವಕರ ನೇಮಕ ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತ್ ಬಯೋಟೆಕ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೂರನೇ ಹಂತದ ಪ್ರಯೋಗದಲ್ಲಿ ಸ್ವಯಂಸೇವಕರಾಗಿ ಭಾಗಿಯಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸಿರುವ ಅವರು, ಆದಷ್ಟು ಬೇಗ ಕ್ಲಿನಿಕಲ್ ಪ್ರಯೋಗ ಆರಂಭಿಸುವುದಾಗಿ ತಿಳಿಸಿದ್ದಾರೆ.
ಕೋವ್ಯಾಕ್ಸಿನ್ನ ಮೊದಲನೇ ಮತ್ತು ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳಲ್ಲಿ ಸುಮಾರು 1,000 ವಿಷಯಗಳ ಮೌಲ್ಯಮಾಪನ ಮಾಡಲಾಗಿದೆ. ಇದೀಗ 'ಕೋವ್ಯಾಕ್ಸಿನ್'ನ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲಾಗಿದೆ.
ಓದಿ: ಡಿಸೆಂಬರ್ನಲ್ಲಿ ಶೇ 14ರಷ್ಟು ಉದ್ಯೋಗ ನೇಮಕಾತಿಯಲ್ಲಿ ಹೆಚ್ಚಳ: ವರದಿ
ಭಾರತ್ ಬಯೋಟೆಕ್ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್-19 ಲಸಿಕೆಯನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ) ಸಹಯೋಗದೊಂದಿಗೆ ಬಿಎಸ್‌ಎಲ್-3 (ಬಯೋ-ಸೇಫ್ಟಿ ಲೆವೆಲ್-3) ಬಯೋ ಕಂಟೈನ್‌ಮೆಂಟ್ ಸೌಲಭ್ಯದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮೂದಲನೇ ಹಾಗೂ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳಲ್ಲಿ ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿ ಫಲಿತಾಂಶಗಳು ಉತ್ತಮವಾಗಿ ಕಂಡು ಬಂದಿವೆ. ಭಾರತ್ ಬಯೋಟೆಕ್ನಿಂದ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಲಾಗಿದೆ.