ಮುಂಬೈ:ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಜೋರಾಗಿ ಬೀಸುತ್ತಿರುವ ಕಾರಣ ಇಂದಿನಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7ರವರೆಗೆ ಬಹುತೇಕ ಎಲ್ಲ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಆದರೆ ತುರ್ತು ಸೇವೆಗೆ ಅವಕಾಶ ನೀಡಲಾಗಿದೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಕೊರೊನಾ ಸೋಂಕಿತ ಪ್ರಕರಣ ದಾಖಲಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಮಾಲ್ಗಳು ರಾತ್ರಿ 8ರಿಂದ ಬೆಳಗ್ಗೆ 7ರವರೆಗೆ ಬಂದ್ ಆಗಿರಲಿವೆ. ಪ್ರಮುಖ ಪ್ರದೇಶಗಳಲ್ಲಿ ಜನದಟ್ಟಣೆ ತಡೆಗಟ್ಟುವ ಉದ್ದೇಶದಿಂದ ರಾತ್ರಿ ಕರ್ಫ್ಯೂ ವಿಧಿಸಲಾಗಿದ್ದು, ಪ್ರಮುಖವಾಗಿ ಶಾಪಿಂಗ್ ಸೆಂಟರ್, ಅಂಗಡಿಗಳು ಬಂದ್ ಇರಲಿದ್ದು, ಜನನಿಬೀಡ ಪ್ರದೇಶಗಳಲ್ಲಿ ಜನರು ಸುತ್ತಾಡುವುದನ್ನ ನಿಷೇಧಿಸಲಾಗಿದೆ.
ಇದನ್ನೂ ಓದಿ: ಮಮತಾ ಬ್ಯಾನರ್ಜಿ ಫೋನ್ ಮಾಡಿ ಸಹಾಯ ಕೇಳಿದ್ರು... ಬಿಜೆಪಿ ಮುಖಂಡನಿಂದ ಆಡಿಯೋ ರಿಲೀಸ್!
ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ 30 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗುತ್ತಿರುವುದು ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಇಂದಿನಿಂದ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಿದೆ. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ರಾತ್ರಿ 8 ಗಂಟೆಯ ನಂತರ ಮನೆಯಿಂದ ಹೊರಬಿದ್ದರೆ ದಂಢ ವಿಧಿಸಲಾಗುವುದು ಎಂದು ತಿಳಿಸಿದೆ.
ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಕಾರಣ ನಾಗ್ಪುರ್, ಬೀಡ್, ಔರಂಗಾಬಾದ್ ಸೇರಿದಂತೆ ಕೆಲವೊಂದು ಪ್ರದೇಶಗಳಲ್ಲಿ ಈಗಾಗಲೇ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಸೋಂಕಿತ ಪ್ರಕರಣ ಹತೋಟಿಗೆ ಬರದೇ ಹೋದರೆ ಸಂಪೂರ್ಣ ಮಹಾರಾಷ್ಟ್ರ ಲಾಕ್ಡೌನ್ ಆಗುವ ಸಾಧ್ಯತೆ ಕೂಡ ದಟ್ಟವಾಗಿದೆ.