ಕರ್ನಾಟಕ

karnataka

ETV Bharat / bharat

22 ದಿನಗಳ ಬಳಿಕ ಮತ್ತೆ 3,000 ರ ಗಡಿ ದಾಟಿದ ಕೋವಿಡ್​ ಸೋಂಕಿತರ ಸಂಖ್ಯೆ - ಕೋವಿಡ್ 19

India COVID daily report.. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ.

COVID 19
COVID 19

By

Published : Jun 2, 2022, 2:25 PM IST

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 3,712 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,64,544 ಕ್ಕೆ ಏರಿಕೆಯಾಗಿದೆ. ಕಳೆದ ಸುಮಾರು 22 ದಿನಗಳ ಬಳಿಕ ಸೋಂಕಿತರ ಸಂಖ್ಯೆ 3,000 ರ ಗಡಿ ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದೊಂದು ದಿನದಲ್ಲಿ 5 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,641 ಜನ ಸಾವನ್ನಪ್ಪಿದ್ದಾರೆ. ಪ್ರಸ್ತುತ ಭಾರತದಲ್ಲಿ 19,509 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 1,123 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ದೈನಂದಿನ ಪಾಸಿಟಿವಿಟಿ ದರ 0.60% ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.0.54 ರಷ್ಟಿದೆ. ನಿನ್ನೆ 2,584 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,20,394 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ. 98.74 ರಷ್ಟಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,41,989 ಮಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಈವರೆಗೆ 193.53 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

ಇದನ್ನೂ ಓದಿ:ಕಮಲದೊಂದಿಗೆ ಹೊಸ ಅಧ್ಯಾಯ ಆರಂಭಿಸಿದ ಹಾರ್ದಿಕ್​.. ಕೈ ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆಂದ ಯುವ ನಾಯಕ

ABOUT THE AUTHOR

...view details