ಕರ್ನಾಟಕ

karnataka

ETV Bharat / bharat

ಕೋವಿಡ್​ ವಿರುದ್ಧದ ಫೈಟ್​​: ತೆಲಂಗಾಣ ಸರ್ಕಾರದಿಂದ 50 ಸಾವಿರ ವೈದ್ಯರ ನೇಮಕಕ್ಕೆ ನಿರ್ಧಾರ - ತೆಲಂಗಾಣ ಕೋವಿಡ್ ನ್ಯೂಸ್

ಕೊರೊನಾ ವಿರುದ್ಧದ ಹೋರಾಟ ರಾಜ್ಯದಲ್ಲಿ ಮುಂದುವರೆದಿದ್ದು, ಇದರ ಮುಂದುವರೆದ ಭಾಗವಾಗಿ ತೆಲಂಗಾಣ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ.

KCR
KCR

By

Published : May 10, 2021, 7:10 PM IST

ಹೈದರಾಬಾದ್​:ದೇಶದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಕೆಲವೊಂದು ರಾಜ್ಯಗಳಲ್ಲಿ ನಿಗದಿತ ಸಮಯಕ್ಕೆ ವೈದ್ಯರ ಸೂಕ್ತ ಚಿಕಿತ್ಸೆ ಸಿಗದೇ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಇದರ ಮಧ್ಯೆ ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದ್ದು, 50 ಸಾವಿರ ವೈದ್ಯರ ನೇಮಕ ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೋವಿಡ್​ ವಿರುದ್ಧದ ಹೋರಾಟದಲ್ಲಿ ಸಹಾಯ ಮಾಡಲು ತಾತ್ಕಾಲಿಕ ಆಧಾರದ ಮೇಲೆ ವೈದ್ಯರ ನೇಮಕ ಮಾಡಿಕೊಳ್ಳಲು ಸೂಚನೆ ನೀಡಿದ್ದು, ದಾದಿಯರು, ಲ್ಯಾಬ್ ತಂತ್ರಜ್ಞರು ಹಾಗೂ ಇತರೆ ಅರೆವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಂಬಿಬಿಎಸ್​ ಪೂರ್ಣ ಮಾಡಿರುವವರನ್ನ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಜತೆಗೆ ಉತ್ತಮ ವೇತನ ನೀಡಲು ಮುಂದಾಗಿದೆ. ಕಷ್ಟ ಕಾಲದಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದು, ಈ ಸಂದರ್ಭದಲ್ಲಿ ಯುವ ವೈದ್ಯರು ಮುಂದೆ ಬರಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ರಾವ್ ಈ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿಲ್ಲ ಲಾಕ್​ಡೌನ್​, ಇದು ಆರ್ಥಿಕತೆ ಕುಸಿತಕ್ಕೆ ಕಾರಣ ಎಂದ ಕೆಸಿಆರ್​

ಈ ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 7,393 ಹಾಸಿಗೆ, 2,470 ಆಕ್ಸಿಜನ್ ಹಾಗೂ 600 ವೆಂಟಿಲೇಟರ್​ ಹಾಸಿಗೆ ಲಭ್ಯ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲು ಈಗಾಗಲೇ ನಿರ್ಧರಿಸಲಾಗಿದ್ದು, ಶಾಲೆ ಓಪನ್​ ಆಗುವವರೆಗೂ ರಾಜ್ಯದ 80 ಸಾವಿರ ಹೆಚ್ಚುವರಿ ಖಾಸಗಿ ಶಾಲಾ ಶಿಕ್ಷಕರಿಗೆ 2 ಸಾವಿರ ರೂ. ಆರ್ಥಿಕ ನೆರವು ಹಾಗೂ ತಿಂಗಳಿಗೆ 25 ಕೆಜಿ ಅಕ್ಕಿ ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.

ABOUT THE AUTHOR

...view details